News Karnataka Kannada
Sunday, April 28 2024
ಉತ್ತರ ಪ್ರದೇಶ

ಸಿಎಂ ಅಭ್ಯರ್ಥಿಯಾಗುವ ಸುಳಿವು ಬಿಟ್ಟುಕೊಟ್ಟ ಪ್ರಿಯಾಂಕಾ ಗಾಂಧಿ

Karnataka model for Madhya Pradesh: Five bhagyas including loan waiver
Photo Credit :

ಲಖನೌ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ ನೀವೂ ಎಲ್ಲಾದರೂ ಕಾಂಗ್ರೆಸ್ ಪಕ್ಷವನ್ನು ನೋಡಿದ್ದೀರಾ? ಆದರೆ ನೀವು ಎಲ್ಲೆಡೆ ನನ್ನ ಮುಖವನ್ನು ನೋಡಬಹುದು ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗುವ ಕುರುಹನ್ನು ಬಿಟ್ಟುಕೊಟ್ಟಿದ್ದಾರೆ.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ 40% ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದರು. ಜೊತೆಗೆ ಸಿಎಂ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ಮಹಿಳೆಯೊಬ್ಬರನ್ನು ನಾಮನಿರ್ದೇಶನ ಮಾಡಬಹುದು ಎಂಬ ಊಹಾಪೋಹಕ್ಕೂ ಕಾರಣವಾಗಿತ್ತು.

ಕಾಂಗ್ರೆಸ್ ಈ ವರ್ಷ ಯುಪಿಯಲ್ಲಿ ಮಹಿಳಾ ಸಮಸ್ಯೆಗಳನ್ನು ಚುನಾವಣಾ ಯೋಜನೆಯಾಗಿ ತೆಗೆದುಕೊಂಡಿದೆ. ಪ್ರಾಥಮಿಕವಾಗಿ ಮಹಿಳಾ ಕೇಂದ್ರಿತ ಯೋಜನೆಗಳ ಸುತ್ತ ಪ್ರಚಾರಗಳು ಆರಂಭವಾಗಿವೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಿವಿಧ ಪ್ರೋತ್ಸಾಹ ಮತ್ತು ಯೋಜನೆಗಳನ್ನು ಪಕ್ಷವು ಭರವಸೆ ನೀಡಿದೆ.

ಯುಪಿಯ ಮಹಿಳಾ ಮತದಾರರನ್ನು ಓಲೈಸುವ ಸಲುವಾಗಿ ಪಕ್ಷವು ‘ಲಡ್ಕಿ ಹೂ, ಲಾಡ್ ಸಕ್ತಿ ಹೂ’, ಬಟನ್ ಡಬಾವೋ, ಸ್ಕೂಟಿ ಪಾವೋ ಎಂಬ ಅಭಿಯಾನವನ್ನು ಪ್ರಾರಂಭಿಸಿತು. ರಾಜ್ಯದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರ ನಡುವೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು