​ಕಾನ್ಪುರ: 123 ಝೀಕಾ ವೈರಸ್ ಪ್ರಕರಣ ಪತ್ತೆ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಇದುವರೆಗೆ ಒಟ್ಟು 123 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 96 ಸಕ್ರಿಯ ಪ್ರಕರಣಗಳಿವೆ ಎಂದು ಉನ್ನತ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಕಾನ್ಪುರದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ಅಕ್ಟೋಬರ್ 23ರಂದು ಪತ್ತೆಯಾಗಿತ್ತು. ಭಾರತೀಯ ವಾಯುಪಡೆಯ ವಾರೆಂಟ್ ಆಫೀಸರ್ ಒಬ್ಬರಲ್ಲಿ ಝೀಕಾ ವೈರಸ್ ಪಾಸಿಟಿವ್ ಕಂಡುಬಂದಿತ್ತು. ಕಳೆದ ಕೆಲ ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ.

ಇವರ ಸಂಪರ್ಕಗಳನ್ನು ಪತ್ತೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಹೊಸದಾಗಿ ಕನೌಜ್‌ನಲ್ಲಿ ಒಂದು ಹಾಗೂ ಲಕ್ನೋದಲ್ಲಿ ಮೂರು ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ.

ಕಳೆದ ವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆರೋಗ್ಯ ಇಲಾಖೆಯ ಉನ್ನತ ಅಧೀಕಾರಿಗಳ ಜತೆ ಸಭೆ ನಡೆಸಿ ಝೀಕಾ ವೈರಸ್ ಸೋಂಕು ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದರು. ಕಟ್ಟುನಿಟ್ಟಿನ ಸರ್ವೇಕ್ಷಣೆ ನಡೆಸುವಂತೆ ಹಾಗೂ ಮನೆಮನೆಗೆ ನೈರ್ಮಲ್ಯ, ಫಾಗಿಂಗ್ ವ್ಯವಸ್ಥೆ ಮಾಡುವ ಮೂಲಕ ಸೊಳ್ಳೆಗಳ ಹರಡುವಿಕೆ ತಡೆಯುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು.

ಕಾನ್ಪುರದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡಾ ಉನ್ನತ ಮಟ್ಟದ ಅಧ್ಯಯನ ತಂಡವನ್ನು ಕಳುಹಿಸಿಕೊಟ್ಟಿತ್ತು.

Swathi MG

Recent Posts

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

7 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

24 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

32 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

51 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

9 hours ago