2017ಕ್ಕೂ ಮುನ್ನ ಉತ್ತರ ಪ್ರದೇಶ ದರೋಡೆಕೋರರ ಸರ್ಕಾರವಾಗಿತ್ತು : ಪ್ರಧಾನಿ ಮೋದಿ

ಆಲಿಗಡ : 2017ಕ್ಕೂ ಮುನ್ನ ಉತ್ತರ ಪ್ರದೇಶ ಸರ್ಕಾರವನ್ನು ದರೋಡೆಕೋರರು ಮತ್ತು ಮಾಫಿಯಾಗಳು ನಡೆಸುತ್ತಿದ್ದವು. ಆದರೆ, ಈಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಎಲ್ಲವೂ ಬದಲಾಗಿದೆ ಮತ್ತು ಅಂತಹವರು ಇದೀಗ ಕಂಬಿಗಳ ಹಿಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ರಾಜಾ ಮಹೇಂದ್ರ ಪ್ರತಾಪಸಿಂಹ ರಾಜ್ಯ ವಿಶ್ವವಿದ್ಯಾಲಯದ ಶಿಲಾನ್ಯಾಸದ ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಡವರಿಗೆ ಮೀಸಲಾದ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಇರುವ ಎಲ್ಲ ದಾರಿಗಳನ್ನು ಮುಚ್ಚಲಾಗುತ್ತಿತ್ತು. ಆದರೆ ಈಗ ಅಂತಹ ಯಾವುದೇ ಅಡೆತಡೆಗಳಿಲ್ಲ ಮತ್ತು ಈ ಯೋಜನೆಗಳ ಪ್ರಯೋಜನಗಳು ಅಗತ್ಯವಿರುವವರಿಗೆ ತಲುಪುತ್ತಿವೆ ಎಂದು ಹೇಳಿದರು.

‘ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕರಾದ ರಾಜ ಮಹೇಂದ್ರ ಪ್ರತಾಪಸಿಂಹ ಅವರ ಸ್ಮರಣೆ ಮತ್ತು ಗೌರವಾರ್ಥವಾಗಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. ಅಲೀಗಢದ ಕೋಲ್ ತೆಹ್ಸಿಲ್‌ನ ಲೋಧಾ ಗ್ರಾಮ ಮತ್ತು ಮುಸೇಪುರ್ ಕರೀಂ ಜಾರೌಲಿ ಗ್ರಾಮದಲ್ಲಿ ಒಟ್ಟು 92 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ’ ಎಂದು ತಿಳಿಸಿದರು.

‘ಭಾರತವನ್ನು ಮೊದಲು ರಕ್ಷಣಾ ಉಪಕರಣಗಳ ಆಮದುದಾರ ಎಂದು ಪರಿಗಣಿಸಲಾಗಿತ್ತು. ಆದರೆ ಇಂದು ದೇಶವನ್ನು ಪ್ರಮುಖ ರಕ್ಷಣಾ ಸಾಮಗ್ರಿಗಳ ರಫ್ತುದಾರ ಎಂದು ಪರಿಗಣಿಸಲಾಗಿದೆ. ಇಂದು ಭಾರತ ಮಾತ್ರವಲ್ಲ, ಪ್ರಪಂಚವು ಆಧುನಿಕ ಗ್ರೆನೇಡ್‌ಗಳು, ರೈಫಲ್‌ಗಳು, ಯುದ್ಧ ವಿಮಾನಗಳು, ಡ್ರೋನ್‌ಗಳು ಮತ್ತು ಯುದ್ಧನೌಕೆಗಳಿಂದ ಹಿಡಿದು ಎಲ್ಲವನ್ನು ದೇಶದಲ್ಲೇ ಹೇಗೆ ತಯಾರಿಸಲಾಗುತ್ತಿದೆ ಎಂಬುದನ್ನು ನೋಡುತ್ತಿವೆ’ ಎಂದು ಅವರು ಹೇಳಿದರು.

ಇದೇವೇಳೆ, ಹಿರಿಯ ಬಿಜೆಪಿ ನಾಯಕ ದಿವಂಗತ ಕಲ್ಯಾಣ್ ಸಿಂಗ್ ಅವರನ್ನು ನೆನಪಿಸಿಕೊಂಡ ಮೋದಿ, ಈ ಸಂದರ್ಭದಲ್ಲಿ ಅವರು ಇದ್ದಿದ್ದರೆ ಅವರ ತವರು ಜಿಲ್ಲೆಯಲ್ಲಿ ರಾಜ ಮಹೇಂದ್ರ ಪ್ರತಾಪ ಸಿಂಹ ಅವರ ಹೆಸರಿನಲ್ಲಿ ವಿಶ್ವವಿದ್ಯಾನಿಲಯ ನಿರ್ಮಾಣವಾಗುತ್ತಿರುವುದನ್ನು ಮೆಚ್ಚಿಕೊಳ್ಳುತ್ತಿದ್ದರು’ ಎಂದರು.

ಈ ಮಧ್ಯೆ, ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರು ವಿಶ್ವವಿದ್ಯಾಲಯದ ಬಗ್ಗೆ ಪ್ರಧಾನಿಗೆ ವಿವರಿಸಿದರು. ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

Raksha Deshpande

Recent Posts

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

23 mins ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

48 mins ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

1 hour ago

ಕಾಂಗ್ರೆಸ್‌ ಪಕ್ಷಕ್ಕೆ ಮುಸ್ಲಿಮರ ಮತ ಬೇಕು, ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದ ನಸೀಮ್‌ ಖಾನ್‌

ಕಾಂಗ್ರೆಸ್‌ಗೆ ಮುಸ್ಲಿಮರ ಮತ ಬೇಕು. ಆದರೆ ಮುಸ್ಲಿಮ್‌ ಅಭ್ಯರ್ಥಿ ಬೇಡ ಎಂದು ಹೇಳಿರುವ ನಸೀಮ್‌ ಖಾನ್‌ ಪಕ್ಷದ ವಿರುದ್ಧ ಸಿಟ್ಟಾಗಿದ್ದು…

1 hour ago

ಕದ್ದ ಬೈಕ್ ಪಾರ್ಕಿಂಗ್‌ ಮಾಡಿ ಪರಾರಿ : 30 ಬೈಕ್‍ ಪೊಲೀಸರ ವಶಕ್ಕೆ

ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್‌ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪಾರ್ಕ್…

2 hours ago

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ…

2 hours ago