News Karnataka Kannada
Wednesday, May 08 2024
ಉತ್ತರ ಪ್ರದೇಶ

ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು

Four killed in accident between truck and car
Photo Credit :

ಉತ್ತರ ಪ್ರದೇಶ: ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ-ಮಥುರಾ ಹೆದ್ದಾರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಚ್ಲಾದಿಂದ ಗಂಗಾನದಿಯಲ್ಲಿ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ ಪರಿಣಾಮ ಎರಡೂ ವಾಹನಗಳು ಪಲ್ಟಿಯಾಗಿವೆ. ಘಟನೆಯಿಂದಾಗಿ ತಾಯಿ, ಮಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಸುಷ್ಮಾ (65), ಅನಿತಾ (40), ಮೀರಾ (60), ಸಂಗೀತಾ (22), ಸಹದೇವ್ (12) ಮತ್ತು ಪೂನಂ (28) ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಒಟ್ಟು 45 ಜನರಿದ್ದರು. ಗಾಯಾಳುಗಳನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಮೂಳಗ ಪೊಲೀಸ್ ಠಾಣಾ ವ್ಯಾಪ್ತಿಯ ಅಹೋರಾಮಾಯಿ ಗ್ರಾಮದ ನಿವಾಸಿ ಭೋಗರಾಜ್ ಅವರ ಕುಟುಂಬ ಮತ್ತು ನೆರೆಹೊರೆಯವರೆಲ್ಲರೂ ತಮ್ಮ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಗಂಗಾನದಿಯಲ್ಲಿ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು