ತಂದೆಯನ್ನೇ ಕೊಲ್ಲಲು ಶೂಟರ್​ ನೇಮಕ: ಕ್ರೂರಿ ಮಗ ಅರೆಸ್ಟ್‌

ಉತ್ತರ ಪ್ರದೇಶ: ತಂದೆಯನ್ನೇ  ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಮೂವರು ದಾಳಿಕೋರರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ  ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದನು. ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ. ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

Chaitra Kulal

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

14 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

42 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago