ಉತ್ತರಪ್ರದೇಶ: ಉತ್ತರ ಪ್ರದೇಶದ ಗೊಂಡಾದಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ಗೆ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟ ಸಂಭವಿಸಿರುವ ಘಟನೆ ಇಂದು (ಜ. 19) ರಂದು ನಡೆದಿದೆ.
ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿದ್ದ ಟ್ರಕ್ ಲಕ್ನೋದಿಂದ ಗೊಂಡಾಗೆ ಬರುತ್ತಿದ್ದಾಗ ಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ರಮುಖ ಲಕ್ನೋ-ಗೊಂಡಾ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ವೇಳೆ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಾಹನಗಳನ್ನು ಘಟನಾ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಲ್ಲಿಸಲಾಯಿತು.