ಗಾಜಿಪುರ: ಇಬ್ಬರು ಬಿಎಚ್ಎಂಎಸ್ ವಿದ್ಯಾರ್ಥಿನಿಯರು ತಮ್ಮ ರೂಮ್ಮೇಟ್ಗಳ ಆಕ್ಷೇಪಾರ್ಹ ಫೋಟೋಗಳು ಮತ್ತು ವೀಡಿಯೊಗಳನ್ನು ಹಿರಿಯ ವಿದ್ಯಾರ್ಥಿಯೊಂದಿಗೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಘಟನೆ ಉತ್ತರ ಪ್ರದೇಶದ ಗಾಜಿಪುರ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.
ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿ ಮಂತಾಶಾ ಕಾಜ್ಮಿ, ಇತರ ಇಬ್ಬರು ವಿದ್ಯಾರ್ಥಿನಿಯರೊಂದಿಗೆ ಸೇರಿ ತನ್ನೊಂದಿಗೆ ವಾಸಿಸುತ್ತಿರುವ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ಕ್ಲಿಕ್ಕಿಸಿ ವಿಡಿಯೋ ಮಾಡುತ್ತಿದ್ದಳು. ಬಳಿಕ ಮೊಹಮ್ಮದ್ ಅಮೀರ್ ಎಂಬ ಹಿರಿಯ ವಿದ್ಯಾರ್ಥಿಗೆ ಅದನ್ನು ಕಳುಹಿಸುತ್ತಿದ್ದಳು. ಈ ವಿಡಿಯೋಗಳು ವೈರಲ್ ಆದ ಬಳಿಕ ಸಂತ್ರಸ್ತ ವಿದ್ಯಾರ್ಥಿನಿಯರು ಆಗಸ್ಟ್ 7ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸಿದ ವೇಳೆ ವಿದ್ಯಾರ್ಥಿನಿಯರ ಆರೋಪಗಳು ನಿಜವೆಂದು ಕಂಡು ಬಂದಿದೆ.
ಘಟನೆಗೆ ಸಂಬಂಧಿಸಿ ಆರೋಪಿ ವಿದ್ಯಾರ್ಥಿನಿ ಮಂತಾಶಾ, ಮತ್ತಿಬ್ಬರು ವಿದ್ಯಾರ್ಥಿಗಳನ್ನು ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.