6 ನೇ ಗಿನ್ನೆಸ್ ವಿಶ್ವ ದಾಖಲೆ ಬರೆದ ಅಯೋಧ್ಯೆ ದೀಪೋತ್ಸವ

ಅಯೋಧ್ಯೆ: ಅಯೋಧ್ಯೆಯು ಶನಿವಾರದಂದು ಭವ್ಯವಾದ ದೀಪೋತ್ಸವ ಆಚರಣೆಗೆ ಸಾಕ್ಷಿಯಾಯಿತು. ರಾಮ್ ಕಿ ಪೈಡಿ ಸೇರಿದಂತೆ ಅಯೋಧ್ಯೆಯ 51 ಘಾಟ್‌ಗಳಲ್ಲಿ 22,23,000 ದೀಪಗಳನ್ನು ಬೆಳಗಿಸುವ ಮೂಲಕ ಉತ್ತರಪ್ರದೇಶ ಸರ್ಕಾರ 6 ನೇ ಗಿನ್ನೆಸ್ ವಿಶ್ವ ದಾಖಲೆ ಬರೆದಿದೆ.

ದೀಪೋತ್ಸವ ಮೆರವಣಿಗೆಯು ಭಗವಾನ್ ರಾಮನ ಸಾರವನ್ನು ಚಿತ್ರಿಸುವ 18 ವಿಸ್ಮಯ-ಸ್ಫೂರ್ತಿದಾಯಕ ಮತ್ತು ದೈವಿಕ ಸ್ತಬ್ದಚಿತ್ರಗಳನ್ನು ಪ್ರದರ್ಶಿಸಿತು. 2022 ರಲ್ಲಿ ದೀಪೋತ್ಸವ ಆಚರಣೆಯ ಸಮಯದಲ್ಲಿ ಸರ್ಕಾರವು 16 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನೆಸ್ ದಾಖಲೆ ಸೃಷ್ಟಿಸಿತ್ತು.

ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜೈವೀರ್ ಸಿಂಗ್ ಅವರು ಶನಿವಾರ ಅಯೋಧ್ಯೆಯಲ್ಲಿ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಭಗವಾನ್ ರಾಮನ ಜೀವನದ ವಿವಿಧ ಮುಖಗಳನ್ನು ವಿವರಿಸುವ ಸ್ತಬ್ಧಚಿತ್ರ ಮೆರವಣಿಗೆಯು ಅಯೋಧ್ಯೆಯ ಉದಯ ಚೌಕದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿ ರಾಮ್ ಕಥಾ ಪಾರ್ಕ್ ಕಡೆಗೆ ಸಾಗಿತು.

ದೀಪೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ದೀಪೋತ್ಸವದ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗ, ಪ್ರತಿಯೊಬ್ಬರಿಗೂ ಒಂದೇ ಒಂದು ಆಸೆಯಿತ್ತು ಅದು ದೇವಾಲಯ (ರಾಮ ಮಂದಿರ) ನಿರ್ಮಾಣ. ಭಗವಾನ್ ರಾಮನ ದೇವಾಲಯದ (ರಾಮ ಮಂದಿರ) ನಿರ್ಮಾಣವು ಕಳೆದ 9.5 ವರ್ಷಗಳಲ್ಲಿ ಪ್ರಧಾನಿ ಮೋದಿಯವರು ಭಾರತದಲ್ಲಿ ಸ್ಥಾಪಿಸಿದ ‘ರಾಮ ರಾಜ್ಯ’ದ ಅಡಿಪಾಯವನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ರಾಮಚರಿತಮಾನಸ್ ಮತ್ತು ರಾಮ್ ಕಥಾದಿಂದ ಪ್ರೇರಿತವಾದ ಸ್ತಬ್ಧಚಿಚ್ರ ಸೇರಿದಂತೆ ಶಬರಿ-ರಾಮ್ ಮಿಲಾಪ್ ಮತ್ತು ಲಂಕಾ ದಹನ್ ಹಾಗೂ ಮಕ್ಕಳ ಹಕ್ಕುಗಳು ಮತ್ತು ಮೂಲಭೂತ ಶಿಕ್ಷಣ, ಮಹಿಳಾ ಸುರಕ್ಷತೆ ಮತ್ತು ಕಲ್ಯಾಣ, ಸ್ವಾವಲಂಬನೆ, ಅರಣ್ಯ ಮತ್ತು ಪರಿಸರದ ರಕ್ಷಣೆ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದಂತಹ ವಿಷಯಗಳ ಕುರಿತು ಸ್ತಬ್ಧಚಿತ್ರ ಕೂಡಾ ಮೆರವಣಿಗೆಯಲ್ಲಿ ಗಮನಸೆಳೆಯಿತು.

ಉತ್ತರ ಪ್ರದೇಶದಿಂದ ಮಾತ್ರವಲ್ಲದೆ, ದೇಶದಾದ್ಯಂತದ ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿವಿಧ ರಾಜ್ಯಗಳ ಜಾನಪದ ನೃತ್ಯಗಳು ಸೇರಿದಂತೆ ಪ್ರದರ್ಶನಗಳನ್ನು ವೀಕ್ಷಿಸಲು ಅಯೋಧ್ಯೆಯಾದ್ಯಂತ ಜನರು ರಸ್ತೆಗಳ ಉದ್ದಕ್ಕೂ ಜಮಾಯಿಸಿದ್ದರು.

Ashika S

Recent Posts

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

9 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

28 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

28 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

47 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

51 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago