News Karnataka Kannada
Monday, April 29 2024
ಉತ್ತರ ಪ್ರದೇಶ

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ಸದ್ದು: ಕಮಾಂಡೋ ಸ್ಥಿತಿ ಗಂಭೀರ

ಮ ಜನ್ಮಭೂಮಿಯಲ್ಲಿ ಮಂಗಳವಾರ ಸಂಜೆ ಗುಂಡಿನ ಸದ್ದು ಮೊಳಗಿದೆ.ಇಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಕಮಾಂಡೋ ಅವರು ತಮ್ಮ ಪೋಸ್ಟ್‌ನಲ್ಲಿ ಶಸ್ತ್ರಾಸ್ತ್ರವನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದ್ದು, ಇದರಿಂದ ಅವರು ಗಾಯಗೊಂಡಿದ್ದಾರೆ.‌
Photo Credit : NewsKarnataka

ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ಮಂಗಳವಾರ ಸಂಜೆ ಗುಂಡಿನ ಸದ್ದು ಮೊಳಗಿದೆ.ಇಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಕಮಾಂಡೋ ಅವರು ತಮ್ಮ ಪೋಸ್ಟ್‌ನಲ್ಲಿ ಶಸ್ತ್ರಾಸ್ತ್ರವನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದ್ದು, ಇದರಿಂದ ಅವರು ಗಾಯಗೊಂಡಿದ್ದಾರೆ.‌ಪ್ಲಟೂನ್ ಕಮಾಂಡರ್ ರಾಮ್ ಪ್ರಸಾದ್ (50) ಅವರನ್ನು ಅಯೋಧ್ಯೆ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿರುವುದರಿಂದ ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆಜಿಎಂಯು ಲಕ್ನೋಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ರಾಮ ಮಂದಿರದಲ್ಲಿ ಸುಮಾರು 6ತಿಂಗಳಿಂದ ಅಲ್ಲಿನ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಗುಂಡು ಸಿಡಿದ ವೇಳೆ ಕಮಾಂಡೋ ರಾಮ್‌ ಪ್ರಸಾದ್‌ ಕರ್ತವ್ಯದಲ್ಲಿದ್ದರು ಹಾಗೂ ಅವರು ತಮ್ಮ ಪೋಸ್ಟ್‌ನಲ್ಲಿ ಶಸ್ತ್ರಾಸ್ತ್ರಗಳನ್ನು ಶುಚಿಗೊಳಿಸುತ್ತಿದ್ದರು ಎಂದು ಪೊಲೀಸ್ ಮಹಾನಿರೀಕ್ಷಕ ಪ್ರವೀಣ್ ಕುಮಾರ್ ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು