News Karnataka Kannada
Thursday, April 18 2024
Cricket
ಉತ್ತರ ಪ್ರದೇಶ

ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ 6 ತಿಂಗಳ ಜೈಲು ಶಿಕ್ಷೆ

2012ರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ಜೊತೆಗೆ ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.
Photo Credit : News Kannada

ಪ್ರಯಾಗರಾಜ್: ​ 2012ರಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ 6 ತಿಂಗಳ ಜೈಲು ಶಿಕ್ಷೆಯಾಗಿದೆ. ಜೊತೆಗೆ ಸಾವಿರ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

2012ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕೋರ್ಟ್​ನ ನ್ಯಾಯಾಧೀಶ ಅಂಬರೀಶ್ ಕುಮಾರ್ ಶ್ರೀವಾಸ್ತವ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.

ಶಿಕ್ಷೆ ಪ್ರಕಟವಾದ ಕೆಲವೇ ಹೊತ್ತಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.

ಈ ಹಿಂದೆ ಜೋಶಿ ಕಾಂಗ್ರೆಸ್‌ನಲ್ಲಿದ್ದರು. ಲಕ್ನೋ ಕ್ಯಾಂಟ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಚಾರ ನಡೆಸುತ್ತಿದ್ದರು. ಫೆಬ್ರವರಿ 17, 2012ರ ಸಂಜೆ ಬಹಿರಂಗ ಚುನಾವಣಾ ಪ್ರಚಾರ ಮುಗಿದ ನಂತರವೂ ರೀಟಾ ಬಹುಗುಣ ಜೋಶಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಬಗ್ಗೆ ವಿರೋಧ ಪಕ್ಷಗಳು ದೂರು ನೀಡಿದ್ದು, ನಂತರ ಪ್ರಕರಣ ದಾಖಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು