News Karnataka Kannada
Wednesday, May 08 2024
ಉತ್ತರ ಪ್ರದೇಶ

ಹೊಸ ಸಂಚಲನಕ್ಕೆ ಕಾರಣವಾದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ

Bundelkhand Expressway not to cause new buzz
Photo Credit : News Kannada

ಉತ್ತರ ಪ್ರದೇಶ:  ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಸಹ ಹಲವಾರು ವಿಶೇಷತೆಗಳೊಂದಿಗೆ ಸಾರಿಗೆ ಸಂಪರ್ಕದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಇದು ದೇಶದಲ್ಲಿಯೇ ಮೊದಲ ಸೌರ ಶಕ್ತಿ ಪ್ರೇರಿತ ಹೆದ್ದಾರಿ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಲ್ಲಿ ಉತ್ತರ ಪ್ರದೇಶ ಸರ್ಕಾರವು ಸಾರ್ವಜನಿಕ-ಖಾಸಗಿ ಪಾಲುದಾರಿಕೆ ಯೋಜನೆ ಅಡಿ ಡಿವೈಡರ್ ಮದ್ಯದಲ್ಲಿ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಸಲಾಗುತ್ತಿದೆ. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೂ ವಿದ್ಯುತ್ ಪೂರೈಕೆ ಮಾಡುವ ಯೋಜನೆ ಸಿದ್ದಪಡಿಸಲಾಗುತ್ತಿದೆ.

ದೆಹಲಿ ಮತ್ತು ಲಕ್ನೋಗೆ ಸೇರ ಸಂಪರ್ಕ ಕಲ್ಪಿಸುವ 296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕಳೆದ ವರ್ಷವಷ್ಟೇ ರೂ. 14,850 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇದು ಡಿಎನ್‌ಡಿ ಫ್ಲೈವೇಯಲ್ಲಿ 9 ಕಿಮೀ, ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ 24 ಕಿಮೀ, ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 165 ಕಿಮೀ ಮತ್ತು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ 135 ಕಿಮೀ ಕ್ರಮಿಸುತ್ತದೆ.

ಹಲವಾರು ವಿಶೇಷತೆಗಳೊಂದಿಗೆ ನಿರ್ಮಾಣವಾದ ಹೊಸ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ  ಅನ್ನು ಕೇವಲ 28 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು