ಪರೀಕ್ಷೆ ಸಮಯದಲ್ಲಿ ನಿದ್ದೆ ಬರದಂತೆ ಉಗ್ರರು ಸೇವಿಸುವಂತ ಮಾತ್ರೆ ನುಂಗುತ್ತಿದ್ದಾರೆ ಮಕ್ಕಳು

ಲಕ್ನೋ: ಪರೀಕ್ಷೆ ಸಮಯದಲ್ಲಿ ನಿದ್ದೆ ಬರಬಾರದೆಂದು ಶಾಲಾ ಮಕ್ಕಳು ಭಯೋತ್ಪಾದಕರು ತೆಗೆದುಕೊಳ್ಳುವಂತಹ ಮಾತ್ರೆಗಳನ್ನು ಸೇವಿಸುತ್ತಿರುವ ಆಘಾತಕಾರಿ ವಿಚಾರವೊಂದು ಬಯಲಾಗಿದೆ.

ಉತ್ತರ ಪ್ರದೇಶದ ಪ್ರಜಕ್ತಾ ಸ್ವರೂಪ್ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಹೀಗಾಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಈಕೆ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ತಪಾಸಣೆ ವೇಳೆ ಆಕೆಯ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ನರಗಳು ಊದಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ವೈದ್ಯರು ಆಕೆಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಸದ್ಯ ವಿದ್ಯಾರ್ಥಿನಿ ಆರೋಗ್ಯ ಚೇತರಿಸಿಕೊಳ್ಳುತ್ತಿದೆ.

ಇತ್ತ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾದ ಬಳಿಕ ಪೋಷಕರು ಆಕೆ ಓದುತ್ತಿದ್ದ ಕೋಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿ ಮಾತ್ರೆಗಳು ತುಂಬಿದ ಬಾಟಲಿಯೊಂದು ಪತ್ತೆಯಾಗಿದೆ.

ಇದರಿಂದ ಆತಂಕಗೊಂಡ ಪೋಷಕರು ಮಾತ್ರೆಗಳನ್ನು ವೈದ್ಯರ ಬಳಿ ತೋರಿಸಿದ್ದಾರೆ. ಆಗ ವೈದ್ಯರು, ಇದು ನಿದ್ದೆ ಬರದಂತೆ ತಡೆಯುವ ಮಾತ್ರೆ ಎಂದು ತಿಳಿಸಿದ್ದಾರೆ.

ಈ ಕುರಿತು ಪೋಷಕರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಆಕೆಯೂ ಒಪ್ಪಿಕೊಂಡಿದ್ದಾಳೆ. ಪರೀಕ್ಷೆಯ ಸಮಯದಲ್ಲಿ ರಾತ್ರಿಯಿಡೀ ಎಚ್ಚರದಿಂದ ಇರಲು ಈ ಮಾತ್ರೆ ಸೇವಿಸುತ್ತಿದ್ದೆ ಎಂದಿದ್ದಾಳೆ.

ಒಂದು ಮಾತ್ರೆ ಸೇವಿಸಿದರೆ ಸುಮಾರು 40 ಗಂಟೆಗಳ ಕಾಲ ಎಚ್ಚರದಿಂದ ಇರುವಂತೆ ಮಾಡುತ್ತದೆ. ಸಾಮಾನ್ಯವಾಗಿ ಈ ಮಾತ್ರೆಗಳನ್ನು ಉಗ್ರರು ತೆಗೆದುಕೊಳ್ಳುತ್ತಾರೆ. ಭಯೋತ್ಪಾದಕ ದಾಳಿ ವೇಳೆ ನಿದ್ರೆ ತಪ್ಪಿಸಲು ಉಗ್ರರು ಇಂತಹ ಮಾತ್ರೆಗಳನ್ನು ನುಂಗಿ ಕಾರ್ಯಾಚರಣೆ ಮಾಡುತ್ತಾರೆ. ಇದು ಮಾರುಕಟ್ಟೆಗಳಲ್ಲಿ ಸಿಗಲ್ಲ. ಆದರೆ ಕಳ್ಳ ಮಾರ್ಗದಲ್ಲಿ ಬೇರೆ ಬೇರೆ ಮಾತ್ರೆಗಳ ಹೆಸರಿನಲ್ಲಿ ಭಾರತಕ್ಕೆ ಸಾಗಿಸಲಾಗುತ್ತದೆ.

ಈ ಸಂಬಂಧ ವೈದ್ಯ ಲೋಕ ಕೂಡ ಆತಂಕ ವ್ಯಕ್ತಪಡಿಸಿದ್ದು, ಇಂತಹ ಮಾತ್ರೆಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.

Ashika S

Recent Posts

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

12 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

42 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

58 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago