ಅಲೀಗಢ: ಹತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ 4 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೊಟೇಲ್ ಒಂದರಲ್ಲಿ ನಡೆದಿದೆ.
ಪ್ರಕರಣ ಹಿನ್ನೆಲೆ ಹೋಟೆಲ್ ಮಾಲೀಕ ಹಾಗೂ ಆತನ ಸಂಬಂಧಿಯನ್ನು ಬಂಧಿಸಲಾಗಿದೆ. ಸ್ಥಳೀಯಾಡಳಿತ ಹೋಟೆಲ್ಗೆ ಬೀಗ ಜಡಿದಿದೆ.
ಬುಧವಾರ ’15 ವರ್ಷದ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಬಳಿಕ ಆಕೆ ಪಕ್ಕದ ಹೋಟೆಲ್ ಒಂದರ ಕೋಣೆಯಲ್ಲಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು’ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಶೇಖರ್ ಪಾಠಕ್ ಶುಕ್ರವಾರ ತಿಳಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರ ಪತ್ತೆಗೆ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.