News Karnataka Kannada
Thursday, May 02 2024
ಉತ್ತರ ಪ್ರದೇಶ

ಶಾಲೆಯಲ್ಲಿ 11ನೇ ತರಗತಿ ವಿದ್ಯಾರ್ಥಿನಿ ಮೇಲೆ ಹಲ್ಲೆ

Class 11 girl assaulted by boy student in Noida school (Lead)
Photo Credit : IANS

ನೋಯ್ಡಾ: ಯುಪಿಯ ನೋಯ್ಡಾದಲ್ಲಿ ಖಾಸಗಿ ಶಾಲೆಯ 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ವಿದ್ಯಾರ್ಥಿಯೊಬ್ಬ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ.  ಇದರಿಂದ ಬೇಸತ್ತ ವಿದ್ಯಾರ್ಥಿನಿ ಶಾಲಾ ಅಧಿಕಾರಿಗಳಿಗೆ  ದೂರು ನೀಡಿದ್ದಾಳೆ.  ಆದರೆ ಆಗ ಈ ದೂರನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ.

ಇನ್ನು ವಿದ್ಯಾರ್ಥಿನಿ ದೂರು ನೀಡಿರುವ ವಿಚಾರ ತಿಳಿದ ವಿದ್ಯಾರ್ಥಿ ಕೋಪಗೊಂಡು  ಆತನ ಇತರ ಸ್ನೇಹಿತರು ಜೊತೆಗೂಡಿ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ.

ಈ ಘಟನೆ ಬಳಿಕ ವಿದ್ಯಾರ್ಥಿನಿಯ ಕುಟುಂಬಸ್ಥರು ಶಾಲಾ ಪ್ರಾಂಶುಪಾಲರಿಗೆ ತಿಳಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.  ಇನ್ನು ಘಟನೆ ಬಳಿಕವೂ ನೋಯ್ಡಾದ ಸೆಕ್ಟರ್ -100 ರಲ್ಲಿರುವ ಪಾಥ್ ವೇಸ್ ಶಾಲೆಯ ಅಧಿಕಾರಿಗಳು ಈ ವಿಚಾರವನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಆರೋಪಿ ವಿದ್ಯಾರ್ಥಿ ಪ್ರಭಾವಿ ಕುಟುಂಬಕ್ಕೆ ಸೇರಿದವನು ಎನ್ನಲಾಗಿದೆ. ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಯ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮತ್ತಷ್ಟು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು