ಇಟಾವಾ: ವೈದ್ಯಕೀಯ ವಿದ್ಯಾರ್ಥಿಯ ಸಾವಿನ ತನಿಖೆಗೆ ಆದೇಶಿಸಿದ ಯುಪಿ ಸಿಎಂ

ಇಟಾವಾ: ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫಾಯಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿಯ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಮೃತನ ಕುಟುಂಬ ಸದಸ್ಯರು ಇದು ಕೊಲೆ ಪ್ರಕರಣ ಎಂದು ಆರೋಪಿಸಿದ್ದಾರೆ.

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹಿಮಾಂಶು ಗುಪ್ತಾ (19) ಅವರ ಶವವು ಭಾನುವಾರ ತನ್ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸತ್ಯಪಾಲ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಮೃತ ವ್ಯಕ್ತಿ ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ತನ್ನ ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಾಯಿ ಹೇಳಿಕೊಂಡಿದ್ದು, ಸಿಬಿಐ ತನಿಖೆಗೆ ಆದೇಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಹಿಮಾಂಶು ಅವರ ದೇಹದ ಮೇಲೆ ಕೆಲವು ಗಾಯದ ಗುರುತುಗಳಿವೆ ಎಂದು ಅವರು ಹೇಳಿದ್ದಾರೆ.

ಈ ಘಟನೆಯನ್ನು “ಅತ್ಯಂತ ದುಃಖಕರ” ಎಂದು ಬಣ್ಣಿಸಿರುವ ಸಮಾಜವಾದಿ ಪಕ್ಷ, ಮೃತರ ಕುಟುಂಬಕ್ಕೆ ಒಂದು ಕೋಟಿ ರೂ.ಗಳ ಆರ್ಥಿಕ ನೆರವು ನೀಡುವಂತೆ ಆಗ್ರಹಿಸಿದೆ.

Ashika S

Recent Posts

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

22 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

1 hour ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

3 hours ago