ಮಥುರಾ, ನ.3: ಮಥುರಾದ ಹೋಟೆಲ್ ಒಂದರಲ್ಲಿ ಗುರುವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಉದ್ಯೋಗಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೋಟೆಲ್ ನ ಮೇಲಿನ ಮಹಡಿಯಲ್ಲಿರುವ ಬಸೇರಾ ಗ್ರೂಪ್ ನ ವೃಂದಾವನ ಗಾರ್ಡನ್ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಉದ್ಯೋಗಿಗಳು ಸಿಕ್ಕಿಬಿದ್ದಿದ್ದಾರೆ.
ಅಗ್ನಿಶಾಮಕ ವಾಹನಗಳು ಮತ್ತು ಮೂರು ಆಂಬ್ಯುಲೆನ್ಸ್ ಗಳು ಸ್ಥಳಕ್ಕೆ ತಲುಪಿದವು. ಗಾಯಗೊಂಡ ಇಬ್ಬರೂ ನೌಕರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.