News Karnataka Kannada
Sunday, May 12 2024
ಉತ್ತರ ಪ್ರದೇಶ

ಯುಪಿಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥನ ಮೇಲೆ ಗುಂಡಿನ ದಾಳಿ

chandrasekhar azad dalit leader
Photo Credit : By Author

ಉತ್ತರ ಪ್ರದೇಶ: ಆಜಾದ್ ಸಮಾಜ ಪಕ್ಷದ ನಾಯಕ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಬುಧವಾರ ದೇವ್‌ಬಂದ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡು ಆಜಾದ್ ಹೊಟ್ಟೆಯನ್ನು ತಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಬಲಿಗರೊಬ್ಬರ ಮನೆಯಲ್ಲಿ ‘ತೆರಹವಿ’ ಆಚರಣೆಯಲ್ಲಿ ಪಾಲ್ಗೊಂಡು ಅಲ್ಲಿಂದ ಎಸ್‌ಯುವಿ ವಾಹನದಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ತನಿಖೆ ಮುಂದುವರಿದಿದ್ದು, ಗುಂಡಿನ ದಾಳಿಯ ಹಿಂದಿನ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಇಂತಹ ಹಠಾತ್ ದಾಳಿಯನ್ನು ನಾನು ನಿರೀಕ್ಷಿಸಿರಲಿಲ್ಲ. ನನ್ನ ಸ್ನೇಹಿತರು, ಬೆಂಬಲಿಗರು ಮತ್ತು ದೇಶಾದ್ಯಂತದ ಕಾರ್ಯಕರ್ತರಲ್ಲಿ ಶಾಂತಿ ಕಾಪಾಡುವಂತೆ ನಾನು ಮನವಿ ಮಾಡಲು ಬಯಸುತ್ತೇನೆ. ನಾವು ನಮ್ಮ ಹೋರಾಟವನ್ನು ಸಾಂವಿಧಾನಿಕವಾಗಿ ಮುಂದುವರಿಸುತ್ತೇವೆ. ಕೋಟ್ಯಂತರ ಜನರ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ ಎಂದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಆಜಾದ್ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು