ಲಕ್ನೋ: ಮದುವೆಗೆ ಹೋಗುತ್ತಿದ್ದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಆಗ್ರಾದ ಕುಬೇರ್ಪುರದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಈ ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಎಸ್ಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾರಿನಲ್ಲಿ ಒಟ್ಟು 8 ಜನರು ಮದುವೆಗೆಂದು ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಿಂದ ಬಿಹಾರದ ಡಿಯೋರಿಯಾಕ್ಕೆ ಹೋಗುತ್ತಿದ್ದರು.
ಈ ವೇಳೆ ಕಾರು ಆಗ್ರಾದ ಕುಬೇರ್ಪುರ ಬಳಿ ಬರುತ್ತಿದ್ದಂತೆ ಡಿವೈಡರ್ಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ 8 ಜನರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟರೇ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಡ್ರೈವರ್ ಮದ್ಯಪಾನ ಮಾಡಿ ಕಾರುಅನ್ನು ಅತಿ ವೇಗವಾಗಿ ಚಾಲನೆ ಮಾಡಿದ್ದರಿಂದ ಈ ಅವಘಡ ನಡೆದಿದೆ.
ಇನ್ನು ಆಕ್ಸಿಡೆಂಟ್ ಆದ ಕಾರಿನ ಹಿಂದೆ ಬರುತ್ತಿದ್ದ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.