ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು, ಮೂವರಿಗೆ ಗಂಭೀರ

ಲಕ್ನೋ: ಮದುವೆಗೆ ಹೋಗುತ್ತಿದ್ದ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದ  ಘಟನೆ ಉತ್ತರ ಪ್ರದೇಶದ ಆಗ್ರಾದ ಕುಬೇರ್‌ಪುರದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಈ ಘಟನೆಯಲ್ಲಿ  ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು,  ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಎಸ್‌ಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಾರಿನಲ್ಲಿ ಒಟ್ಟು 8 ಜನರು ಮದುವೆಗೆಂದು ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಿಂದ ಬಿಹಾರದ ಡಿಯೋರಿಯಾಕ್ಕೆ ಹೋಗುತ್ತಿದ್ದರು.

ಈ ವೇಳೆ ಕಾರು ಆಗ್ರಾದ ಕುಬೇರ್‌ಪುರ ಬಳಿ ಬರುತ್ತಿದ್ದಂತೆ ಡಿವೈಡರ್​ಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ 8 ಜನರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟರೇ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಡ್ರೈವರ್ ಮದ್ಯಪಾನ ಮಾಡಿ ಕಾರುಅನ್ನು ಅತಿ ವೇಗವಾಗಿ ಚಾಲನೆ ಮಾಡಿದ್ದರಿಂದ ಈ ಅವಘಡ ನಡೆದಿದೆ.

ಇನ್ನು ಆಕ್ಸಿಡೆಂಟ್ ಆದ ಕಾರಿನ ಹಿಂದೆ ಬರುತ್ತಿದ್ದ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ  ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Ashika S

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

18 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

37 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

38 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

40 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

53 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago