ಹರ್ದೋಯ್: ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.
ಮಕ್ಪುರದಲ್ಲಿ ಕಾಮಗಾರಿಗಾಗಿ ದೊಡ್ಡ ಹೊಂಡವೊಂದನ್ನು ನಿರ್ಮಾಣ ಮಾಡಲಾಗಿತ್ತು. ಇದೇ ಹೊಂಡದಲ್ಲಿ ನೀರು ತುಂಬಿಕೊಂಡಿದ್ದು, ಮಕ್ಕಳು ಆಟವಾಡಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.