ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ನಗರ್ ಕೊಟ್ವಾಲಿ ಪ್ರದೇಶದ ಧಿಕೋಲಿ ರಸ್ತೆಯಲ್ಲಿರುವ ಕಾರ್ಖಾನೆ ನಡೆಸುತ್ತಿದ್ದ ಮನೆಯಲ್ಲಿ ಈ ಘಟನೆ ನಡೆದಿದೆ.
ಸ್ಫೋಟ ಸಂಭವಿಸಿದ ಮನೆ ಕುಸಿದಿದ್ದು, ಜನರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳದಿಂದ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.