ಉತ್ತರ ಪ್ರದೇಶ: ಗ್ರೇಟರ್ ನೋಯ್ಡಾದಲ್ಲಿ ಇಂದು(ಸೆ.15) ಭಾರೀ ಅಪಘಾತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದಿದೆ. ಈ ಅವಘಡದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.ಈ ಘಟನೆ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೃತರೆಲ್ಲರೂ ಕೂಲಿ ಕಾರ್ಮಿಕರು ಎನ್ನಲಾಗಿದೆ. ಲಿಫ್ಟ್ ಕುಸಿತದಿಂದ ಸಂಭವಿಸಿದ ಅಪಘಾತದ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.