News Karnataka Kannada
Tuesday, April 30 2024
ಉತ್ತರ ಪ್ರದೇಶ

ಜ್ಞಾನವಾಪಿ ಪ್ರಕರಣ: ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಇಂದು ತೀರ್ಪು

ಜ್ಞಾನವಾಪಿ ಸಂಕೀರ್ಣದಲ್ಲಿರುವ ವ್ಯಾಸ ತೆಹ್ಖಾನಾ ಅಥವಾ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ  ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ ಇವತ್ತು ತನ್ನ ತೀರ್ಪು  ಪ್ರಕಟಿಸಲಿದೆ.
Photo Credit : News Kannada

ಲಖನೌ: ಜ್ಞಾನವಾಪಿ ಸಂಕೀರ್ಣದಲ್ಲಿರುವ ವ್ಯಾಸ ತೆಹ್ಖಾನಾ ಅಥವಾ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ  ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ ಇವತ್ತು ತನ್ನ ತೀರ್ಪು  ಪ್ರಕಟಿಸಲಿದೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜನವರಿ 31ರ ಆದೇಶದಲ್ಲಿ ಜ್ಞಾನವಾಪಿ ಮಸೀದಿಯ ದಕ್ಷಿಣ ಭಾಗದಲ್ಲಿರುವ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿದ್ದರು.  31 ವರ್ಷಗಳ ನಂತರ ಇದೇ ತಿಂಗಳ ಆರಂಭದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪ್ರಥಮ ಬಾರಿಗೆ ಪೂಜೆ ನೆರವೇರಿಸಲಾಗಿತ್ತು.

ಫಿರ್ಯಾದಿ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಮತ್ತು ಶ್ರೀಗಳು ಸೂಚಿಸಿದ ಅರ್ಚಕರಿಂದ ಏಳು ದಿನಗಳಲ್ಲಿ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಮೂಲಕ ವಿಗ್ರಹಗಳ ಪೂಜೆಗೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ವಾರಣಾಸಿ ನ್ಯಾಯಾಲಯದ ಜನವರಿ 31ರ ಆದೇಶವನ್ನು ತಡೆಹಿಡಿಯಲು ಕೋರಿ ಮುಸ್ಲಿಮರು ಸಲ್ಲಿಸಿದ್ದ ಮನವಿಯನ್ನು ಫೆಬ್ರುವರಿ 2ರಂದು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು.

ಹಿಂದೂ ಕಡೆಯವರು ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿತ್ತು. ಪರಿಣಾಮವಾಗಿ ಜನವರಿ 17ರ ಆದೇಶವನ್ನು ಪ್ರಶ್ನಿಸಲು ಮಸೀದಿ ಸಮಿತಿಯು ತನ್ನ ಮನವಿಯಲ್ಲಿ ತಿದ್ದುಪಡಿ ಮಾಡಲು ಫೆಬ್ರವರಿ 6ರವರೆಗೆ ಕಾಲಾವಕಾಶವನ್ನು ಹೈಕೋರ್ಟ್ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು