ಉತ್ತರ ಪ್ರದೇಶ

ಜ್ಞಾನವಾಪಿ ಪ್ರಕರಣ: ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಇಂದು ತೀರ್ಪು

ಲಖನೌ: ಜ್ಞಾನವಾಪಿ ಸಂಕೀರ್ಣದಲ್ಲಿರುವ ವ್ಯಾಸ ತೆಹ್ಖಾನಾ ಅಥವಾ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ  ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ ಇವತ್ತು ತನ್ನ ತೀರ್ಪು  ಪ್ರಕಟಿಸಲಿದೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜನವರಿ 31ರ ಆದೇಶದಲ್ಲಿ ಜ್ಞಾನವಾಪಿ ಮಸೀದಿಯ ದಕ್ಷಿಣ ಭಾಗದಲ್ಲಿರುವ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿದ್ದರು.  31 ವರ್ಷಗಳ ನಂತರ ಇದೇ ತಿಂಗಳ ಆರಂಭದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪ್ರಥಮ ಬಾರಿಗೆ ಪೂಜೆ ನೆರವೇರಿಸಲಾಗಿತ್ತು.

ಫಿರ್ಯಾದಿ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಮತ್ತು ಶ್ರೀಗಳು ಸೂಚಿಸಿದ ಅರ್ಚಕರಿಂದ ಏಳು ದಿನಗಳಲ್ಲಿ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಮೂಲಕ ವಿಗ್ರಹಗಳ ಪೂಜೆಗೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ವಾರಣಾಸಿ ನ್ಯಾಯಾಲಯದ ಜನವರಿ 31ರ ಆದೇಶವನ್ನು ತಡೆಹಿಡಿಯಲು ಕೋರಿ ಮುಸ್ಲಿಮರು ಸಲ್ಲಿಸಿದ್ದ ಮನವಿಯನ್ನು ಫೆಬ್ರುವರಿ 2ರಂದು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು.

ಹಿಂದೂ ಕಡೆಯವರು ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿತ್ತು. ಪರಿಣಾಮವಾಗಿ ಜನವರಿ 17ರ ಆದೇಶವನ್ನು ಪ್ರಶ್ನಿಸಲು ಮಸೀದಿ ಸಮಿತಿಯು ತನ್ನ ಮನವಿಯಲ್ಲಿ ತಿದ್ದುಪಡಿ ಮಾಡಲು ಫೆಬ್ರವರಿ 6ರವರೆಗೆ ಕಾಲಾವಕಾಶವನ್ನು ಹೈಕೋರ್ಟ್ ನೀಡಿತ್ತು.

Ashika S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

30 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

46 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago