ಲಕ್ನೋ: ಮಹತ್ವದ ಬೆಳವಣಿಗೆಯೊಂದರಲ್ಲಿ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ ನೀಡಿದೆ.
ಮಸೀದಿ ಪರಿಶೀಲಿಸಲು ಆಯುಕ್ತರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಪುರಸ್ಕರಿಸಿದ ನ್ಯಾ. ಮಯಾಂಕ್ ಕುಮಾರ್ ಜೈನ್ ಅವರಿದ್ದ ಪೀಠ ಮೂವರು ಅಧಿಕಾರಿಗಳಿರುವ ಆಯೋಗ ರಚಿಸುವಂತೆ ಸೂಚಿಸಿದೆ. ಶ್ರೀ ಕೃಷ್ಣನ ಜನ್ಮಸ್ಥಳವು ಮಸೀದಿಯ ಕೆಳಗೆ ಇದೆ ಮತ್ತು ಮಸೀದಿಯು ಹಿಂದೂ ದೇವಾಲಯವಾಗಿದೆ ಎಂದು ತೋರಿಸುವ ಹಲವು ಚಿಹ್ನೆಗಳು ಇವೆ. ಹೀಗಾಗಿ ಮಸೀದಿಯನ್ನು ಪರಿಶೀಲಿಸಲು ಆಯೋಗವನ್ನು ಸ್ಥಾಪಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.