ಉತ್ತರ ಪ್ರದೇಶ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಹೈ ಟೆನ್ಷನ್ ತಂತಿ ಬಸ್ ಮೇಲೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾದ ಘಟನೆ ನಡೆದಿದೆ.
ಮರ್ದಾಹ್ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಹರ್ ಧಾಮ್ ಬಳಿ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಬಸ್ಸಿನಲ್ಲಿ ಮದುವೆಗೆ ಹೊರಟಿದ್ದ ಅತಿಥಿಗಳು ಹೆಚ್ಚಾಗಿದ್ದರು ಎನ್ನಲಾಗಿದೆ. ಒಟ್ಟು 38 ಪ್ರಯಾಣಿಕರು ಸಂಚಾರ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಸ್ಪಷ್ಟತೆ ಇಲ್ಲ. ಈ ಅವಘಡದಲ್ಲಿ ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ.
ಡಿಎಂ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪಂಧಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.