ಪಾಟ್ನಾ: ಲೋಕಸಭೆ ಚುನಾವಣೆಗೆ ನಾನು ಪ್ರಧಾನಿ ಅಭ್ಯರ್ಥಿಯಾಗಲು ಇಚ್ಛಿಸುವುದಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ. 2024ರ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ನಾನು ಬಯಸುತ್ತೇನೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ವಿಪಕ್ಷಗಳ ಇಂಡಿಯಾ ಒಕ್ಕೂಟ ಸಂಚಾಲಕನ ಪಾತ್ರವನ್ನು ಸ್ವೀಕರಿಸುತ್ತೀರಾ ಎಂಬ ಪ್ರಶ್ನೆಗೆ ನನಗೆ ಅಂತಹ ಯಾವುದೇ ಆಸೆ ಇಲ್ಲ. ಆದರೆ ಎಲ್ಲರನ್ನೂ ಒಗ್ಗೂಡುವಂತೆ ಮಾಡುವುದೇ ನನ್ನ ಗುರಿ ಎಂದು ಹೇಳಿದ್ದಾರೆ.
ಮುಂಬರುವ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ನಿಟ್ಟಿನಲ್ಲಿ 26 ಪಕ್ಷಗಳ ಇಂಡಿಯಾ ಒಕ್ಕೂಟವು ಈಗಾಗಲೇ 2 ಬಾರಿ ಸಭೆ ನಡೆಸಿದ್ದು, ಆಗಸ್ಟ್ 31, ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ಮತ್ತೊಮ್ಮೆ ಸಭೆ ನಡೆಯಲಿದೆ.