News Karnataka Kannada
Thursday, May 16 2024
ಉತ್ತರ ಪ್ರದೇಶ

ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯ ತಲೆಗೆ ಗುಂಡು ಹಾರಿಸಿದ ಇನ್‍ಸ್ಪೆಕ್ಟರ್

Photo Credit : News Kannada

ಲಕ್ನೋ: ಪಾಸ್‌ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಮೇಲೆ ಸಬ್ ಇನ್‍ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಅಲಿಘರ್‌ನಲ್ಲಿ ನಡೆದಿದೆ. ಮಹಿಳೆ ತಲೆಗೆ ಗಂಭೀರ ಗಾಯವಾಗಿದೆ.

ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಇಶ್ರತ್ ಎಂದು ತಿಳಿದು ಬಂದಿದೆ. ಆಕೆ ತನ್ನ ಮಗನೊಂದಿಗೆ ಠಾಣೆಗೆ ಬಂದಿದ್ದರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸ್ ಅಧಿಕಾರಿ ಎಸ್‍ಐ ಮನೋಜ್ ಶರ್ಮಾ ಅವರಿಗೆ ಪಿಸ್ತೂಲ್ ನೀಡಿದ್ದಾರೆ. ಈ ವೇಳೆ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ಮಹಿಳೆ ತಲೆಗೆ ಗಂಭೀರ ಗಾಯವಾಗಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.

ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದೃಶ್ಯ ಸಿಸಿಟಿವಯಲ್ಲಿ ಸೆರೆಯಾಗಿದೆ.

ಎಸ್‍ಐ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಆತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು