News Karnataka Kannada
Thursday, May 02 2024
ಉತ್ತರ ಪ್ರದೇಶ

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ: ಇಂದು ಮಹತ್ವದ ತೀರ್ಪು ಪ್ರಕಟ

Krishna Janmabhoomi-Shahi Idgah Masjid dispute: Court to pronounce verdict today
Photo Credit : IANS

ಪ್ರಯಗ್ರಾಜ್: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಸಲ್ಲಿಸಲಾದ ಪಿಐಎಲ್ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ವಿವಾದಿತ ಆವರಣವನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ಪಿಐಎಲ್ ಕೋರಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ನ್ಯಾಯಾಲಯದ ತೀರ್ಪು ಹೊರಬೀಳಲಿದೆ. ಮುಖ್ಯ ನ್ಯಾ. ಪ್ರೀತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಲಿದೆ. ವಿಚಾರಣೆ ಪೂರ್ಣಗೊಂಡ ನಂತರ, ನ್ಯಾಯಾಲಯವು ಸೆ.4 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತು.

2020ರಲ್ಲಿ, ಸುಪ್ರೀಂ ಕೋರ್ಟ್ ವಕೀಲ ಮೆಹಕ್ ಮಹೇಶ್ವರಿ ಅವರು ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದ ಪ್ರಕರಣದಲ್ಲಿ ಪಿಐಎಲ್ ಸಲ್ಲಿಸಿದ್ದರು ಮತ್ತು ವಿವಾದಿತ ಆವರಣವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು