ಲಕ್ನೋ: ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ಲಕ್ನೋ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.
ಚಾಲಕ ನಿದ್ದೆಗೆ ಜಾರಿದ ಕಾರಣ ಕಾರ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಆತನ ತಂದೆ ಮತ್ತು ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಪೊಲೀಸರು ಚಾಲಕ ಸೇರಿದಂತೆ ಇತರ ಮೂವರು ಪ್ರಯಾಣಿಕರನ್ನು ಆಂಬ್ಯುಲೆನ್ಸ್ ಮೂಲಕ ಪಿಜಿಐ ಸೈಫೈಗೆ ಸಾಗಿಸಿದರು.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.