ಲಕ್ನೋ: 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉತ್ತರಪ್ರದೇಶದಲ್ಲಿ ಉಚಿತ ಬಸ್ ಪ್ರಯಾಣ

ಲಕ್ನೋ:  ಸರ್ಕಾರಿ ಬಸ್ ಗಳಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ತಮ್ಮ ಸರ್ಕಾರ ಒದಗಿಸಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಬುಧವಾರ ಈ ಘೋಷಣೆ ಮಾಡಿದ್ದಾರೆ.

ಹಿರಿಯ ಮಹಿಳಾ ನಾಗರಿಕರಿಗೆ ಉಚಿತ ಬಸ್ ಪ್ರಯಾಣವು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಒಂದಾಗಿದೆ.

ರಕ್ಷಾ ಬಂಧನದ ಸಂದರ್ಭದಲ್ಲಿ ರಾಜ್ಯದಲ್ಲಿ ಮಹಿಳೆಯರಿಗೆ ೪೮ ಗಂಟೆಗಳ ಕಾಲ ಉಚಿತ ಬಸ್ ಪ್ರಯಾಣವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಆಗಸ್ಟ್ 10 (ಬೆಳಿಗ್ಗೆ 12) ರಿಂದ ಆಗಸ್ಟ್ 12 ರವರೆಗೆ (ಬೆಳಿಗ್ಗೆ 12 ಗಂಟೆ) ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ  ಉಚಿತವಾಗಿ ಪ್ರಯಾಣಿಸಬಹುದು ಎಂದು ಯೋಗಿ ಆದಿತ್ಯನಾಥ್ ಹೇಳಿದರು.

“ಉತ್ತರ ಪ್ರದೇಶದಲ್ಲಿ ರಕ್ಷಾ ಬಂಧನದ ಸಂದರ್ಭದಲ್ಲಿ, ಆಗಸ್ಟ್ 12 ರ ಮಧ್ಯರಾತ್ರಿ 12 ರಿಂದ 12 ರವರೆಗೆ ಸರ್ಕಾರಿ ಬಸ್ ಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಎಲ್ಲಾ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗುವುದು” ಎಂದು ಅವರು ಟ್ವೀಟ್ ಮಾಡಿದ್ದಾರೆ.

Ashika S

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

11 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

15 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

22 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

34 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

40 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

54 mins ago