News Karnataka Kannada
Monday, April 22 2024
Cricket
ಉತ್ತರ ಪ್ರದೇಶ

ಹೋಳಿ ಸಂಭ್ರಮಾಚರಣೆ  ವೇಳೆ ಮುಸ್ಲಿಂ ಮಹಿಳೆಗೆ ಕಿರುಕುಳ: ಆರೋಪಿಯ ಬಂಧನ

ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ  ವೇಳೆ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
Photo Credit : NewsKarnataka

ಲಕ್ನೋ: ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ  ವೇಳೆ ಮುಸ್ಲಿಂ ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯ ಜೊತೆಗೆ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಮುಸ್ಲಿಂ ದಂಪತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಥಳದಲ್ಲೇ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದ ಗುಂಪೊಂದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದಿದ್ದಾರೆ. ಅಲ್ಲದೇ ಪೈಪ್‌ ಮೂಲಕ ಮಹಿಳೆ ಮೇಲೆ ನೀರು ಹಾರಿಸಿದ್ದಾರೆ. ಇದಕ್ಕೆ ಮಹಿಳೆ ವಿರೋಧಿಸಿದರೂ ಗುಂಪು ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ. ಮುಸ್ಲಿಂ ಮಹಿಳೆ ಮುಖಕ್ಕೆ ಬಲವಂತವಾಗಿ ಬಣ್ಣ ಬಳಿದಿದ್ದಾರೆ.

ಈ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೋ ವೈರಲ್ ಆದ ಕೂಡಲೇ ಬಿಜ್ನೋರ್ ಪೊಲೀಸ್ ಮುಖ್ಯಸ್ಥ ನೀರಜ್ ಕುಮಾರ್ ಜದೌನ್, ಸ್ಥಳೀಯ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸ್ವಯಂಪ್ರೇರಣೆಯಿಂದ ಮಹಿಳೆಗೆ ನೋವುಂಟು ಮಾಡುವುದು ಮತ್ತು ಹಲ್ಲೆ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು