ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಧಾರ್ಮಿಕ ಶಿಕ್ಷಕ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.
ಆರು ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ, ಮಸೀದಿಯ ಧಾರ್ಮಿಕ ಶಿಕ್ಷಕ ಮಂಗಳವಾರ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಯನ್ನು ಮಸೀದಿಯ ಬಳಿಯ ತನ್ನ ಕೊಠಡಿಗೆ ಕರೆದೊಯ್ದ ಆರೋಪಿಯು ಅತ್ಯಾಚಾರ ನಡೆಸಿದ್ದಾನೆ.
ಐಪಿಸಿ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.