News Karnataka Kannada
Sunday, April 28 2024
ಉತ್ತರ ಪ್ರದೇಶ

ಮೊರಾದಾಬಾದ್: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡವೊಂದಕ್ಕೆ ಬೆಂಕಿ, ಐವರ ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.
Photo Credit : Pixabay

ಮೊರಾದಾಬಾದ್: ಮೊರಾದಾಬಾದ್ ಜಿಲ್ಲೆಯ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ನಗರದ ಮದುವೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.

ಈ ಘಟನೆಯ ನಂತರ, ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು ಮತ್ತು ಶೀಘ್ರದಲ್ಲೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಪ್ರತ್ಯಕ್ಷದರ್ಶಿಗಳು ಏಳು ಜನರನ್ನು ಬೆಂಕಿಯಿಂದ ರಕ್ಷಿಸಲು ಸಹಾಯ ಮಾಡಿದರು.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು