ನೊಯ್ಡಾ: ಎಲೆಕ್ಟ್ರಿಕ್ ಸ್ಕೂಟರ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನೊಯ್ಡಾದಲ್ಲಿ ನಡೆದಿದೆ. ಬಿಗ್ ಬಾಸ್ಕೆಟ್ ಡೆಲಿವರಿ ಬಾಯ್ ಒಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈತ ಸವಾರಿ ಮಾಡ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಚಲಿಸ್ತಾ ಇದ್ದ ಸ್ಕೂಟರ್ನಿಂದ ಜಂಪ್ ಮಾಡುವ ಮೂಲಕ ಆತ ಪಾರಾಗಿದ್ದಾನೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.