ನೊಯ್ಡಾ: ಶಾಲೆಗೆ ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ 20 ವರ್ಷದ ಯುವಕನೊಬ್ಬ ಬುಧವಾರ ಅತ್ಯಾಚಾರ ಎಸಗಿರುವ ಘಟನೆ ನೊಯ್ಡಾದಲ್ಲಿ ನಡೆದಿದೆ.
ಪೊಲೀಸರು ಆತನನ್ನು ಬಂಧಿಸಿರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ಆರೋಪಿ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.
‘ಬಾಲಕಿಯು ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದಾಗ ಆರೋಪಿ ಆಕೆಯನ್ನು ಭೇಟಿಯಾಗಿ ಆಮಿಷವೊಡ್ಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.