ಉತ್ತರ ಪ್ರದೇಶ

ನೋಯ್ಡಾ: ಬಸ್ ಮತ್ತು ಕಾರ್ ನಡುವೆ ಡಿಕ್ಕಿ, ಇಬ್ಬರ ದುರ್ಮರಣ

ನೋಯ್ಡಾ: ನೋಯ್ಡಾದಲ್ಲಿ ಭಾನುವಾರ ಸಂಭವಿಸಿದ ಬಸ್ ಮತ್ತು ಕಾರು ಅಪಘಾತದಲ್ಲಿಇಬ್ಬರು ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಉತ್ತರ ಪ್ರದೇಶದ ಬುಲಂದ್ಶಹರ್ ನಿವಾಸಿಗಳಾದ ಪುರುಷೋತ್ತಮ್ (45) ಮತ್ತು ರಿಂಕು (35) ಎಂದು ಗುರುತಿಸಲಾಗಿದೆ.

ಅಧಿಕಾರಿಯ ಪ್ರಕಾರ, ಮೊಹಮ್ಮದ್ಪುರ ಗ್ರಾಮದ ಬಳಿಯ ಝಜಾರ್-ರಬುಪುರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಝಾಜಾರ್ನಿಂದ ರಬುಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ರೆನಾಲ್ಟ್ ಟ್ರೈಬರ್ಗೆ ಡಿಕ್ಕಿ ಹೊಡೆದಿದೆ.

ಘಟನೆ ನಡೆದ ತಕ್ಷಣ, ಬಸ್ಸಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಇನ್ನೂ ಬಂಧಿಸಲಾಗಿಲ್ಲ. “ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಪುರುಷೋತ್ತಮ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಗರದ ಕೈಲಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಎರಡನೇ ವ್ಯಕ್ತಿ ಸಾವನ್ನಪ್ಪಿದ್ದಾರೆ .ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ” ಎಂದು ಅಧಿಕಾರಿ ಹೇಳಿದರು.

Ashika S

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

13 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

23 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

37 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago