ಉತ್ತರ ಪ್ರದೇಶ: ಯುಪಿಯ ಸಂಭಾಲ್ನ ಬಿಜೆಪಿ ನಾಯಕ ಅನುಜ್ ಚೌಧರಿ ಅವರನ್ನು ಮೊರಾದಾಬಾದ್ನಲ್ಲಿರುವ ಅವರ ನಿವಾಸದ ಹೊರಗೆ ಗುರುವಾರ ಸಂಜೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
34 ವರ್ಷದ ಚೌಧರಿ ತಮ್ಮ ಅಪಾರ್ಟ್ಮೆಂಟ್ನ ಹೊರಗೆ ಇನ್ನೊಬ್ಬ ವ್ಯಕ್ತಿಯೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್ನಲ್ಲಿ ಬಂದ ಮೂವರು ವ್ಯಕ್ತಿಗಳು ಏಕಾಏಕಿ ಗುಂಡು ಹಾರಿಸಿ ಹತ್ಯೆಗೈದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.
ಅನುಜ್ ಚೌದರಿ ಹತ್ಯೆಗೆ ರಾಜಕೀಯ ಪ್ರತಿಸ್ಪರ್ಧಿಗಳೇ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ. ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.