ವಿಶ್ವದ ಶೇಷ್ಠ ಕ್ರೀಡಾಂಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ವಾರಣಾಸಿ: ಭಗವಾನ್‌ ಶಿವನ ತ್ರಿಶೂಲ ಆಕಾರದ ಫ್ಲಡ್-ಲೈಟ್‌ಗಳನ್ನು ಹೊಂದಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಭಾಷಣಕ್ಕೂ ಮುನ್ನ ಪ್ರಧಾನಿ ಮೋದಿ ಅವರಿಗೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಹಿ ಮಾಡಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಲಾಗಿದೆ.

ಹರಹರ್ ಮಹಾದೇವ್’ ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ, ಕ್ರೀಡಾಂಗಣವನ್ನು ‘ಮಹಾದೇವ್’ಗೆ ಸಮರ್ಪಿಸಲಾಗುವುದು ಎಂದು ಹೇಳಿದರು. ‘ಮಹಾದೇವ’ ನಗರದ ಈ ಕ್ರೀಡಾಂಗಣವನ್ನು ‘ಮಹಾದೇವ’ನಿಗೆ ಸಮರ್ಪಿಸಲಾಗುವುದು. ಕಾಶಿಯಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣದಿಂದ ಇಲ್ಲಿನ ಕ್ರೀಡಾ ಪಟುಗಳಿಗೆ ಅನುಕೂಲವಾಗಲಿದೆ ಎಂದ ಅವರು, ಈ ಕ್ರೀಡಾಂಗಣ ಪೂರ್ವಾಂಚಲ ಪ್ರದೇಶದ ಸ್ಟಾರ್ ಆಗಲಿದೆ ಎಂದು ಹೇಳಿದ್ದಾರೆ.

ಸುಮಾರು 450 ಕೋಟಿ ರೂ.ವೆಚ್ಚದಲ್ಲಿ 30 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಪಡಿಸುತ್ತಿರುವ ಕ್ರಿಕೆಟ್ ಕ್ರೀಡಾಂಗಣದ ವಾಸ್ತುಶೈಲಿಯು ಭಗವಾನ್ ಶಿವನಿಂದ ಸ್ಫೂರ್ತಿ ಪಡೆದಿದ್ದು, ಅರ್ಧಚಂದ್ರಾಕಾರದ ಛಾವಣಿ, ತ್ರಿಶೂಲ ಆಕಾರದ ಫ್ಲಡ್-ಲೈಟ್‌ಗಳನ್ನು ಒಳಗೊಂಡಿದೆ. ಕ್ರೀಡಾಂಗಣವು 30,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago