ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಡಿ.30 ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 3,284.60 ಕೋಟಿ ವೆಚ್ಚದ 29 ಅಭಿವೃದ್ಧಿ ಯೋಜನೆಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ
ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳ ನಡುವೆ 15 ಕಿ.ಮೀ.ವರೆಗೆ ರೋಡ್ ಶೋ ನಡೆಯಲಿದೆ. ಇನಂತರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರೋಡ್ ಶೋ ಹಾದುಹೋಗುವ 51 ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿದಿದೆ.