News Karnataka Kannada
Thursday, May 09 2024
ಉತ್ತರ ಪ್ರದೇಶ

ಪ್ರಯಾಗ್ ರಾಜ್: ರಸ್ತೆ ಅಪಘಾತ, ಮಗು ಸೇರಿ ನಾಲ್ವರು ಮಹಿಳೆಯರ ಸಾವು

Uttar Pradesh: Three killed as truck rams into dhaba
Photo Credit : Wikipedia

ಪ್ರಯಾಗ್ ರಾಜ್: ಎಸ್ ಯುವಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಮೃತಪಟ್ಟು, ಇತರ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಹಂಡಿಯಾ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನ್ಪುರದಿಂದ ವಾರಣಾಸಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಎಲ್ಲಾ ಸಹಾಯವನ್ನು ಒದಗಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು