News Karnataka Kannada
Monday, April 29 2024
ಉತ್ತರ ಪ್ರದೇಶ

ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಭಾಷಣ ಮಾಡುವಾಗಲೇ ಕುಸಿದು ಬಿದ್ದು ಪ್ರೊಫೆಸರ್‌ ಸಾವು

Professor dies after collapsing while delivering speech on health care
Photo Credit : News Kannada

ಕಾನ್ಪುರ: ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದೇ ರೀತಿ ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ.

ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು. ಖಂಡೇಕರ್ ಅವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾತನಾಡುತ್ತಿದ್ದರು. ಖಂಡೇಕರ್ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ಎದೆಯಲ್ಲಿ ಸ್ಬಲ್ಪ ನೋವು ಕಾಣಿಸಿಕೊಂಡಿತ್ತು.

ಅವರು ಭಾವುಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಸ್ವಲ್ಪ ಸಮಯದ ನಂತರ ಬೆವರು ಬರಲು ಶುರುವಾಗಿತ್ತು. ವೇದಿಕೆ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯ ನೀರಜ್ ಕುಮಾರ್ ಪ್ರಕಾರ, ಆಸ್ಪತ್ರೆಗೆ ಕರೆತರುವ ಮೊದಲೇ ಖಂಡೇಕರ್ ಮೃತಪಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು