ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀ ರಾಮ್’ ಬರೆದ ವಿದ್ಯಾರ್ಥಿಗಳು ಪಾಸ್‌

ಲಕ್ನೋ: ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಪ್ರತಿಗಳ ಮೌಲ್ಯಮಾಪನದ ಸಮಯದಲ್ಲಿ ಆರ್‌ಟಿಐ ಪ್ರತಿಕ್ರಿಯೆಯಿಂದ ಈ ಅಕ್ರಮ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ. ಇಂತಹ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಮಾತನಾಡಿದ ಉಪಕುಲಪತಿ ವಂದನಾ ಸಿಂಗ್ ಅವರು, ” ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನು ಈ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬಗ್ಗೆ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು. ರಾಜ್ಯಭವನಕ್ಕೂ ಈ ಬಗ್ಗೆ ಪತ್ರ ಬರೆಯಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ.ಈ ಕೃತ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದ್ದೇನೆ ಎಂದಿದ್ದಾರೆ.

 

Ashitha S

Recent Posts

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಅಭಿಯಾನ

ಜಿಲ್ಲೆಯ ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಮೇ8ರಂದು ಅಭಿಯಾನ ನಡೆಸಲು ಚಿಂತನೆ ನಡೆಸಲಾಗಿದೆ.

6 mins ago

ಪೆನ್‌ಡ್ರೈವ್‌ ಪ್ರಕರಣದಲ್ಲಿ 3-4 ಆತ್ಮಹತ್ಯೆ : ಜೆಡಿಎಸ್‌ ನಾಯಕ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಜೆಡಿಎಸ್‌ ನಾಯಕ, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ಅವರು…

10 mins ago

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್

ಬಹುಭಾಷಾ ನಟ ಫಾಹದ್ ಫಾಸಿಲ್ ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ಪುಷ್ಪ ಮಾಡಿದ್ದಕ್ಕೆ ನನಗೇನು ಸಿಕ್ತು ಅನ್ನೋದು ತಪ್ಪು…

28 mins ago

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

 ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ…

29 mins ago

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

53 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

1 hour ago