ನೋಯ್ಡಾ : ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಜನವರಿ 21ರಿಂದ 26ರ ವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ಮತ್ತು ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ದಿನದ ಅಂಗವಾಗಿ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 144ರ ಅಡಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಅನುಮತಿ ಇಲ್ಲದೆ ಪ್ರದರ್ಶನ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹೃದೇಶ್ ಕಠಾರಿಯಾ ಹೇಳಿದ್ದಾರೆ.