ರಾಂಪುರ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸನಾತನ ಧರ್ಮ ನಿರ್ಮೂಲನೆಗೆ ಮಾಡುವ ಬಗ್ಗೆ ಕರೆ ನೀಡಿದ್ದ ಉದಯನಿಧಿ ಸ್ಟಾಲಿನ್ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಆರೋಪದ ಮೇಲೆ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ವಕೀಲರಾದ ಹರ್ಷ ಗುಪ್ತ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.