News Karnataka Kannada
Sunday, April 28 2024
ಉತ್ತರ ಪ್ರದೇಶ

ಶಹಜಹಾನ್‌ಪುರ್‌: ಬೈಕ್‌ ಸವಾರರನ್ನು 500 ಮೀಟರ್‌ ಎಳೆದೊಯ್ದ ಟ್ರಕ್‌, ಮೂವರು ಸಾವು

Two killed as truck collides with bike
Photo Credit : IANS

ಶಹಜಹಾನ್‌ಪುರ್‌: ಸ್ಕೂಟರ್‌ಗೆ ಟ್ರಕ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನವನ್ನು ಸುಮಾರು 500 ಮೀಟರ್ ಎಳೆದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಕತ್ರಾ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಲಾಲ್‌ಪುರ ಗ್ರಾಮದ ನಿವಾಸಿಗಳಾದ ರಾಮ್‌ದಿನ್ (40), ಅವರ ಅತ್ತಿಗೆ ಸುರ್ಜಾ ದೇವಿ (35) ಮತ್ತು ಮೂರು ವರ್ಷದ ಸೋದರಳಿಯ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಹಿಂದಿನಿಂದ ಟ್ರಕ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಎಸ್‌.ಆನಂದ್‌ ಮಾತನಾಡಿ, ಲಾರಿ ಸ್ಕೂಟರ್‌ನ್ನು ಸುಮಾರು 500 ಮೀಟರ್‌ ದೂರ ಎಳೆದೊಯ್ದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ ಗಾಯಗೊಂಡ ಮೂವರು ಸಂತ್ರಸ್ತರನ್ನು ಚಿಕಿತ್ಸೆಗಾಗಿ ಬರೇಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ. ಟ್ರಕ್ ಚಾಲಕ ತನ್ನ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು