ಶಹಜಹಾನ್ಪುರ್: ಸ್ಕೂಟರ್ಗೆ ಟ್ರಕ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನವನ್ನು ಸುಮಾರು 500 ಮೀಟರ್ ಎಳೆದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಕತ್ರಾ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಲಾಲ್ಪುರ ಗ್ರಾಮದ ನಿವಾಸಿಗಳಾದ ರಾಮ್ದಿನ್ (40), ಅವರ ಅತ್ತಿಗೆ ಸುರ್ಜಾ ದೇವಿ (35) ಮತ್ತು ಮೂರು ವರ್ಷದ ಸೋದರಳಿಯ ತಮ್ಮ ಮನೆಗೆ ಹಿಂದಿರುಗುತ್ತಿದ್ದಾಗ ಹಿಂದಿನಿಂದ ಟ್ರಕ್ ಅವರ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ.
ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಎಸ್.ಆನಂದ್ ಮಾತನಾಡಿ, ಲಾರಿ ಸ್ಕೂಟರ್ನ್ನು ಸುಮಾರು 500 ಮೀಟರ್ ದೂರ ಎಳೆದೊಯ್ದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ ಗಾಯಗೊಂಡ ಮೂವರು ಸಂತ್ರಸ್ತರನ್ನು ಚಿಕಿತ್ಸೆಗಾಗಿ ಬರೇಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ. ಟ್ರಕ್ ಚಾಲಕ ತನ್ನ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ.
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…