ಬರೇಲಿ: ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಮಂಗಗಳ ಗುಂಪೊಂದು ಅಟ್ಟಿಸಿಕೊಂಡು ಬರುವಾಗ ಬಾಲಕಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಟೆರೇಸ್ ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸಿರ್ಸಿ ಪಟ್ಟಣದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಎರಡನೇ ತರಗತಿ ವಿದ್ಯಾರ್ಥಿನಿ ಕೃತಿ ಎಂದು ತಿಳಿದು ಬಂದಿದೆ. ಬಾಲಕಿ ತನ್ನ ಅಜ್ಜನ ಜತೆಗೆ ಮನೆಯ ಟೆರೇಸ್ ನಲ್ಲಿ ಆಟವಾಡುತ್ತಿದ್ದ ವೇಳೆ ಘಟನೆ ನಡೆದಿದೆ. ತೀವ್ರ ಗಾಯಗಳಾಗಿದ್ದ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರು. ಆ ವೇಳೆಗಾಗಲೇ ಮೃತಪಟ್ಟಿರುವುದನ್ನು ವೈದ್ಯರು ತಿಳಿಸಿದ್ದಾರೆ. ಬಾಲಕಿಯ ದೇಹವನ್ನು ಶವಪರೀಕ್ಷೆಗೆ ನೀಡಲು ಕುಟುಂಬ ನಿರಾಕರಿಸಿದೆ ಎಂದು ಪೊಲೀಸರು ಹೇಳಿದ್ದಾರೆ.