ನೋಯ್ಡಾ: ವಿದ್ಯಾರ್ಥಿನಿಯೊಬ್ಬಳು 18ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
18 ವರ್ಷದ ಬಾಲಕಿ ಸಂಜೆ ಬಾಲ್ಕನಿಯಲ್ಲಿ ಗಿಡಗಳಿಗೆ ನೀರು ಹಾಕುತ್ತಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಸಾರ್ಖ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿಮಾಲಯ ಪ್ರೈಡ್ ಸೊಸೈಟಿಯಲ್ಲಿ 12 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಬಾಲ್ಕನಿಯಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ, ಆಕೆಯ ಪೋಷಕರು ಶಿಕ್ಷಕರಾಗಿದ್ದಾರೆ.