News Karnataka Kannada
Saturday, May 04 2024
ಉತ್ತರ ಪ್ರದೇಶ

ತಡರಾತ್ರಿ ಏಕಾಏಕಿ ಹಾಸ್ಟೆಲ್ ತಪಾಸಣೆ: 89 ವಿದ್ಯಾರ್ಥಿನಿಯರು ನಾಪತ್ತೆ

girls missing
Photo Credit : News Kannada

ಉತ್ತರ ಪ್ರದೇಶ: ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧಎಫ್‌ಐಆರ್ ದಾಖಲಾಗಿದ್ದು, ಹಠಾತ್ ತಪಾಸಣೆಯ ವೇಳೆ ಒಟ್ಟು 100 ವಿದ್ಯಾರ್ಥಿನಿಯರಲ್ಲಿ 11 ಮಂದಿ ಮಾತ್ರ ಪತ್ತೆಯಾಗಿದ್ದು, ಉಳಿದ 89 ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಪರಸ್‌ಪುರದಲ್ಲಿ ಈ ಘಟನೆ ನಡೆದಿದ್ದು, ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಸೋಮವಾರ ರಾತ್ರಿ ತಪಾಸಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಒಟ್ಟು 100 ವಿದ್ಯಾರ್ಥಿನಿಯರು ದಾಖಲಾಗಿದ್ದಾರೆ. ಆದರೆ, ತಪಾಸಣೆ ವೇಳೆ ಕೇವಲ 11 ಬಾಲಕಿಯರು ಮಾತ್ರ ಪತ್ತೆಯಾಗಿದ್ದು, ಉಳಿದ 89 ಬಾಲಕಿಯರು ನಾಪತ್ತೆಯಾಗಿದ್ದಾರೆ. ಇದು ಗಂಭೀರ ನಿರ್ಲಕ್ಷ್ಯ, ವಸತಿ ಬಾಲಕಿಯರ ಹಾಸ್ಟೆಲ್ ಅನ್ನು ಈ ರೀತಿ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು